- Advertisement -
- Advertisement -





ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳಿಗೆ ಮುಂದಿನ ಸಂಘಟನಾ ಅವಧಿಗೆ ನೂತನ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪುತ್ತೂರು ಗ್ರಾಮಾಂತರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಸುನೀಲ್ ದಡ್ಡು, ಲೋಕೇಶ್ ಚಾಕೋಟೆರವರನ್ನು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ನಿಯುಕ್ತಿಗೊಳಿಸಿದ್ದಾರೆ.


ಪುತ್ತೂರು ನಗರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಯುವರಾಜ್ ಪಿರಿಯತ್ತೋಡಿ ಹಾಗೂ ಶಶಿಧರ್ ನಾಯಕ್ ಇವರನ್ನು ಬಿಜೆಪಿ ಪುತ್ತೂರು ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕೆ ನಿಯುಕ್ತಿಗೊಳಿಸಿದ್ದಾರೆ.


- Advertisement -








