




ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ (RMSA) – ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೆಕಳ ಹಾಜಬ್ಬ, ಶ್ರೀ ಭಾರತೀ ಜನಾರ್ದನ ಸೇವಾ ಟ್ರಸ್ಟ್ ವಿಟ್ಲ ಇದರ ಕಾರ್ಯದರ್ಶಿ ಸುಬ್ರಾಯ ಪೈ, ಕ್ಷೇತ್ರ ಶಿಕ್ಷಣಾಧಿಕಾರಿ ಬಂಟ್ವಾಳ ಮಂಜುನಾಥನ್ ಎಂ ಜಿ, ಶಿಕ್ಷಣ ಸಂಯೋಜಕಿ ಶ್ರೀಮತಿ ಸುಧಾ, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಜೈಕಿಶನ್, ಗಾನ್ವಿ ಇನ್ಫ್ರಾಸ್ಟ್ರಕ್ಚರ್ ನ ವಿರಾಜ್ ಕುಲಾಲ್, ನಿವೃತ್ತ ಶಿಕ್ಷಕಿ ಶ್ರೀಮತಿ ಶಂಕರಿ ಅಮ್ಮ, ಪಟ್ಟಣ ಪಂಚಾಯತ್ ಸದಸ್ಯೆ ಶ್ರೀಮತಿ ಸುನಿತಾ ಕೋಟ್ಯಾನ್, ಪ್ರೌಢಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ರಶ್ಮಿ ಹರೀಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಾಥ ವಿಟ್ಲ ಇವರು ಭಾಗವಹಿಸಿದ್ದರು.


ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಹರೆಕಳ ಹಾಜಬ್ಬ ಮತ್ತು ಮಂಜುನಾಥನ್ ಎಂ ಜಿ ಇವರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಶ್ರೀಮತಿ ಸ್ವಾಗತಿಸಿದರು. ಶ್ರೀಮತಿ ವಾರಿಜ ವಂದಿಸಿದರು. ದಯಾನಂದ ನಿರೂಪಿಸಿದರು.









