Saturday, July 25, 2026
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ಯುವತಿ ವಾಪಾಸು ಬಾರದೇ ನಾಪತ್ತೆ

- Advertisement -
- Advertisement -

ಉಡುಪಿ: ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಯುವತಿಯೋರ್ವಳು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ಯುವತಿಯನ್ನು ಜಯಪುರ ಜಿಲ್ಲೆ ಚಡಚಣ ತಾಲೂಕು ದೇವರನಿಂಬರಗಿ ಮೂಲದ ಪ್ರಸ್ತುತ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬನ್ನಂಜೆಯ ನಿವಾಸಿ ಪ್ರೇಮಾಂಜಲಿ (24) ಎಂದು ಗುರುತಿಸಲಾಗಿದೆ.

ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪ್ರೇಮಾಂಜಲಿ ನ.24ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

4 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ತಿಳಿಸುವಂತೆ ಉಡುಪಿ ನಗರ ಪೊಲೀಸ್‌ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!