Tuesday, July 28, 2026
spot_imgspot_img
spot_imgspot_img

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

- Advertisement -
- Advertisement -

ಉಡುಪಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಗರದ ಒಳಕಾಡು ಎಂಬಲ್ಲಿ ನಡೆದಿದೆ.

ಶೈಲಾ ವಿಲ್ಲೆಲೀನಾ (53) ಮತ್ತು ಮನೆಯವರು ರಾತ್ರಿ ಊಟ ಮಾಡಿ ಮಲಗಿದ್ದರು.ಈ ವೇಳೆ ಮನೆಗೆ ನುಗ್ಗಿದ ಕಳ್ಳರು, ಕೋಣೆಯೊಂದರ ಕಪಾಟಿನಲ್ಲಿಟ್ಟಿದ್ದ 44.60 ಲಕ್ಷ ರೂ. ಮೌಲ್ಯದ 368 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಬೆಳಗ್ಗೆ ಚರ್ಚ್‌ಗೆ ತೆರಳಲು ಚಿನ್ನಾಭರಣ ಧರಿಸಲು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!