Monday, July 20, 2026
spot_imgspot_img
spot_imgspot_img

ಆಳ್ವಾಸ್‌ ಸಂಸ್ಥೆಯ ಐದು ವಿದ್ಯಾರ್ಥಿಗಳಿಗೆ ಅತ್ಯುನ್ನತ ಕ್ರೀಡಾ ಪ್ರಶಸ್ತಿ-ಒರ್ವಳಿಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ

- Advertisement -
- Advertisement -

ಮೂಡುಬಿದಿರೆ: ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೂಲಕ ನೀಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗಳಾದ ಏಕಲವ್ಯ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಐದು ವಿದ್ಯಾರ್ಥಿಗಳಿಗೆ ಲಭಿಸಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2022-23ನೇ ಸಾಲಿಗೆ ವೇಟ್‌ಲಿಫ್ಟಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಆಳ್ವಾಸ್‌ನ ವಿದ್ಯಾರ್ಥಿನಿ ಉಷಾ ಬಿ. ಎನ್. ಅವರಿಗೆ ಏಕಲವ್ಯ ಪ್ರಶಸ್ತಿ ಸಂದಿದೆ. ಜೊತೆಗೆ, 2023ನೇ ಸಾಲಿನ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ನಾಲ್ವರು ಕ್ರೀಡಾಪಟುಗಳಾದ ದಿವ್ಯ ಎಂ. ಎಸ್. (ಬಾಲ್ ಬ್ಯಾಡ್ಮಿಂಟನ್), ಮೇಘನಾ ಎಚ್.ಎಂ. (ಬಾಲ್ ಬ್ಯಾಡ್ಮಿಂಟನ್), ಶಂಕರಪ್ಪ (ಮಲ್ಲಕಂಬ) ಮತ್ತು ಆತ್ಮೀಯಾ ಎಂ. ಬಿ. (ಕಬಡ್ಡಿ) ಅವರು ಆಯ್ಕೆಯಾಗಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.

ಈ ಪ್ರಶಸ್ತಿಗಳನ್ನು ಸೇರಿಸಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನಕ್ಕೆ ಈವರೆಗೆ ಒಟ್ಟು 6 ಏಕಲವ್ಯ ಪ್ರಶಸ್ತಿಗಳು ಮತ್ತು 25 ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಳು ಲಭಿಸಿದಂತಾಗಿದೆ. ವಿಶೇಷವಾಗಿ, ಬಾಲ್ ಬ್ಯಾಡ್ಮಿಂಟನ್ ವಿಭಾಗವೊಂದರಲ್ಲೇ ಆಳ್ವಾಸ್‌ಗೆ 11 ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಳು ಲಭಿಸಿವೆ ಎಂದರು.

- Advertisement -

Related news

error: Content is protected !!