Wednesday, July 22, 2026
spot_imgspot_img
spot_imgspot_img

ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧ ಸಾವು

- Advertisement -
- Advertisement -

ಬೆಂಗಳೂರು: ಕೆಟಿಎಂ ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವನ್ನಪ್ಪಿದ ಘಟನೆ ನಾಗರಬಾವಿಯ ಮುಖ್ಯರಸ್ತೆಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಮಂಗನಹಳ್ಳಿಯ ಮಧು (74) ಎಂದು ಗುರುತಿಸಲಾಗಿದೆ.

ಮಂಗಳವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಟಿಎಂ ಬೈಕ್ ಸವಾರ ಶ್ರೀನಿವಾಸಗ ಎಂಬಾತ ಅಪಘಾತವೆಸಗಿದ್ದಾನೆ. ಅಪಘಾತದ ಪರಿಣಾಮ ಮಧು ತಲೆಗೆ ತೀವ್ರ ಪೆಟ್ಟಾಗಿತ್ತು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿ ಶ್ರೀನಿವಾಸ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!