Saturday, September 5, 2026
spot_imgspot_img
spot_imgspot_img

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ- ಮತ್ತೆ ನಿರಾಸೆ ಹೈಕೋರ್ಟ್​ನಿಂದ ಮಹತ್ವದ ಆದೇಶ-ಏನದು ಆದೇಶ?..

- Advertisement -
- Advertisement -

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ತೀರ್ಪು ಪ್ರಶ್ನಿಸಿ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಾದ-ಪ್ರತಿವಾದ ಆಲಿಸಿದ ಬಳಿಕ ಪ್ರಜ್ವಲ್​ ಜಾಮೀನು ಅರ್ಜಿಯನ್ನ ವಜಾಗೊಳಿಸಿದ್ದಾರೆ.

 ಜಾಮೀನು ಮಂಜೂರು ಮಾಡಲು ಮತ್ತೆ ಹೈಕೋರ್ಟ್ ನಿರಾಕರಿಸಿದ್ದು, ಬೇಲ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಕೆಳಹಂತದ ನ್ಯಾಯಾಲಯ ಆದೇಶ ಅಮಾನತಿನಲ್ಲಿ ಇರಿಸಿ, ಜಾಮೀನು ನೀಡುವಂತೆ ಮನವಿ ಮಾಡಿದ್ದ ಪ್ರಜ್ವಲ್ ರೇವಣ್ಣ ಅವರ ಮನವಿಯನ್ನು ಹೈಕೋರ್ಟ್​ ತಿರಸ್ಕರಿಸಿದೆ. ಇದರಿಂದ ಪ್ರಜ್ವಲ್‌ ಗೆ ಮತ್ತೆ ನಿರಾಸೆಯಾಗಿದೆ.

ಡಿಸೆಂಬರ್​ 1ರಂದು ನಡೆದ ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್‌ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ವಾದ ಮಂಡಿಸಿದ್ದರು.

- Advertisement -

Related news

error: Content is protected !!