- Advertisement -
- Advertisement -




ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ಕಾಂಗ್ರೆಸ್ ಕಾರ್ಯಕರ್ತನ ಕೊಲೆಯಲ್ಲಿ ಪರ್ಯಾವಸಾನಗೊಂಡಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕಾಂಗ್ರೇಸ್ ಕಾರ್ಯಕರ್ತ ಗಣೇಶ್ ಗೌಡ ಕಲ್ಮರಡಿ ಮಠದ ಕಿರಿದಾದ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕ್ನಲ್ಲಿ ಅಡ್ಡಗಟ್ಟಿದ ಹಂತಕರ ತಂಡ ಅವರ ಮೇಲೆ ಮಚ್ಚಿನಿಂದ ದಾಳಿ ಮಾಡಿದೆ. ನಂತರ ಮಚ್ಚನ್ನು ಅಲ್ಲೇ ಬಿಸಾಡಿ ಹಂತಕರು ತೆರಳಿದ್ದಾರೆ.
ಘಟನೆಗೆ ಸಂಬಂದಿಸಿದಂತೆ ಸಖರಾಯಪಟ್ಟಣ ಪೊಲೀರು ಸಂಜಯ್, ಭೂಷಣ್, ಮಿಥುನ್ ಸೇರಿದಂತೆ 5 ಜನರನ್ನು ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
- Advertisement -








