Wednesday, July 22, 2026
spot_imgspot_img
spot_imgspot_img

ಗೋವಾ ಕ್ಲಬ್‌ನಲ್ಲಿ ಬೆಂಕಿ ಅವಘಡ; 23 ಮಂದಿ ಸಜೀವ ದಹನ

- Advertisement -
- Advertisement -

ಗೋವಾ: ಉತ್ತರ ಗೋವಾದ ಅರ್ಪೋರಾದಲ್ಲಿರುವ ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಕರಾವಳಿ ರಾಜ್ಯದ ಅತ್ಯಂತ ಜನಪ್ರಿಯ ಬೀಚ್‌ಗಳಲ್ಲಿ ಒಂದಾದ ಬಾಗಾದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್ ಎಂಬ ಕ್ಲಬ್‌ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಮಧ್ಯರಾತ್ರಿಯ ಸುಮಾರಿಗೆ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಲವಾರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಭಾನುವಾರ ಬೆಳಗಿನ ಜಾವದವರೆಗೂ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದವು. ಮೃತರಲ್ಲಿ ಹೆಚ್ಚಿನವರು ಕ್ಲಬ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಎಂದು ಪೊಲೀಸರು ತಿಳಿಸಿದ್ದಾರೆ . ಡಿಜಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಉತ್ತರ ಗೋವಾ ಜಿಲ್ಲೆಯ ಪೊಲೀಸ್ ತಂಡಗಳು ಸ್ಥಳಕ್ಕೆ ದೌಡಾಯಿಸಿವೆ.

ಇಲ್ಲಿಯವರೆಗೆ 23 ಸಾವುನೋವುಗಳು ವರದಿಯಾಗಿವೆ. ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಸಂಭವಿಸಿದೆ. ಈಗ ಅದನ್ನು ನಿಯಂತ್ರಣಕ್ಕೆ ತರಲಾಗಿದೆ. ಬೆಂಕಿಯ ಕಾರಣವನ್ನು ಇನ್ನೂ ಖಚಿತಪಡಿಸಿಕೊಳ್ಳಲಾಗಿಲ್ಲ. ತಂಡಗಳು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿವೆ. ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.

- Advertisement -

Related news

error: Content is protected !!