Monday, September 14, 2026
spot_imgspot_img
spot_imgspot_img

ಕಾಡಾನೆ ದಾಳಿಯಿಂದ ಕಾರ್ಮಿಕನ ಸ್ಥಿತಿ ಗಂಭೀರ

- Advertisement -
- Advertisement -

ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಬಾಳೆಹೊನ್ನೂರಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ಕಾರ್ಮಿಕನನ್ನು ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಗಣಪತಿ ಎಂದು ಗುರುತಿಸಲಾಗಿದೆ.

ಆನೆ ದಾಳಿಯಿಂದ ಕಾರ್ಮಿಕ ಪ್ರಜ್ಞೆ ಕಳೆದುಕೊಂಡಿದ್ದು, ಗಂಭಿರ ಸ್ಥಿತಿಯಲ್ಲಿದ್ದಾರೆ. ಎಡಗೈ ಮಾತ್ರ ನಡುಗುತ್ತಿದ್ದು, ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಬದುಕಿರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ.

ಬಾಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತೋಟದಲ್ಲೇ ಮೂರು ಕಾಡಾನೆಗಳು ಬೀಡು ಬಿಟ್ಟಿದ್ದು, ಗ್ರಾಮಸ್ಥರು ಆನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಆಗ್ರಹಿಸಿದ್ದಾರೆ.

- Advertisement -

Related news

error: Content is protected !!