Tuesday, July 21, 2026
spot_imgspot_img
spot_imgspot_img

ಕಾಂಗ್ರೆಸ್ ನಾಯಕನ ಪುತ್ರನ ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

- Advertisement -
- Advertisement -


ಮಾಗಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಪುತ್ರ ಆರ್. ಶಶಾಂಕ್ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ತಾಲೂಕಿನ ಗುಡೇಮಾರನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಬೆಳಗುಂಬ ಗ್ರಾಮದ ರಾಜೇಶ್ (27) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಜೇಶ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಮಾಗಡಿಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಶಶಾಂಕ್ ಅವರಿದ್ದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ರಾಜೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಆಗಮಿಸಿದ ಕುದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!