Thursday, July 23, 2026
spot_imgspot_img
spot_imgspot_img

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ಕೈಯಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ಅಪ್ಲೋಡ್ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಗರದ ಬಂದರು ಜೆ.ಎಂ. ರೋಡ್ ನಿವಾಸಿ ಅಮೀರ್ ಸುಹೇಲ್ (28) ಮತ್ತು ಕಾವೂರು ಪಂಜಿಮೊಗರು ಉರುಂದಾಡಿ ಗುಡ್ಡೆ ನಿವಾಸಿ ಸುರೇಶ (29) ಎಂದು ಗುರುತಿಸಲಾಗಿದೆ.

“Suresh Psy” ಎಂಬ ಹೆಸರಿನ ಫೇಸ್ ಬುಕ್ ಖಾತೆ ಹೊಂದಿರುವ ಸುರೇಶ ಡಿಸೆಂಬರ್ 13ರಂದು ತನ್ನ ಫೇಸ್ ಬುಕ್ ಖಾತೆಯಲ್ಲಿಅಮೀರ್ ಸುಹೇಲನು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವೀಡಿಯೋದ ಮೇಲೆ ವೈಬ್ಸ್ ಮತ್ತು ಬಿಳಿ ಬಣ್ಣದ ಹೃದಯದ ಗುರುತಿನ ಚಿಹ್ನೆಯೊಂದಿಗೆ ಸ್ಟೋರಿ ಹಾಕಿದ್ದ.

ಸಾಮಾಜಿಕ ಜಾಲತಾಣ ಪರಿಶೀಲನೆ ವೇಳೆ ಇದನ್ನು ಗಮನಿಸಿದ ಪೊಲೀಸರು, ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ಕೆಲಸ ಮಾಡಿದ ಅಮೀರ್ ಸುಹೇಲ್ ಹಾಗೂ ಸುರೇಶನ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023 ಜತೆಗೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಕಲಂ 4.25(1ಬಿ) ಹಾಗೂ ಐ.ಟಿ. ಕಾಯ್ದೆ 66 ರಂತೆ ಪ್ರಕರಣ ದಾಖಲಿಸಿದ್ದರು.

ಆರೋಪಿಗಳನ್ನು ಬಂಧಿಸಿ ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

- Advertisement -

Related news

error: Content is protected !!