Thursday, October 29, 2026
spot_imgspot_img
spot_imgspot_img

ಬಳ್ಳಾರಿ: 40 ಹೊಸ ಬೈಕ್ ಗಳನ್ನು ಹೊತ್ತುಬಂದ ಗೂಡ್ಸ್ ಲಾರಿ ಭಸ್ಮ-ಬೈಕ್‌ ಸಮೇತ ಹೊತ್ತಿ ಉರಿದ ಲಾರಿ

- Advertisement -
- Advertisement -

ಬಳ್ಳಾರಿ: ನಿಲ್ಲಿಸಿದ್ದ ಗೂಡ್ಸ್ ಲಾರಿಯೊಂದು ಬೆಂಕಿಗಾಹುತಿಯಾಗಿ ಅದರಲ್ಲಿದ್ದ 40 ಬೈಕ್ ಗಳು ಬೆಂಕಿಗಾಹುತಿಯಾದ ಘಟನೆ ಬಳ್ಳಾರಿ ನಗರದಲ್ಲಿ ಸಂಭವಿಸಿದೆ.


ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಿಂದ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಭಾರಿಯಾಗಿ ಹೊತ್ತಿಕೊಂಡಿದೆ. ಅದರಲ್ಲಿದ್ದ ಯಮಹಾ ಕಂಪೆನಿಗೆ ಸೇರಿದ 40 ಬೈಕ್ ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಬೈಕ್ ಗಳನ್ನು ಚೆನೈಯಿಂದ ಬಳ್ಳಾರಿಗೆ ಸಾಗಿಸಲಾಗುತ್ತಿತ್ತು. ಈ ಅವಘಡದಲ್ಲಿ ಸುಮಾರು 45 ಲಕ್ಷ ರೂ. ಮೌಲ್ಯದ 40 ಬೈಕ್ ಗಳು ಬೆಂಕಿಗೆ ಆಹುತಿಯಾಗಿವೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಘಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಈ ಬಗ್ಗೆ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಕಿ ಅವಘಡದ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!