Tuesday, July 21, 2026
spot_imgspot_img
spot_imgspot_img

ವಿಟ್ಲ ಮುಡ್ನೂರು ಗ್ರಾ.ಪಂ ಮತ್ತು ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಶನ್ (ರಿ) ಚಿಕ್ಕಮಂಗಳೂರು ಆಶ್ರಯದಲ್ಲಿ

- Advertisement -
- Advertisement -

ನವೀಕರಿಸಬಹುದಾದ ಇಂಧನ ಮತ್ತು ಘನ ತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮತ್ತು ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಶನ್ (ರಿ) ಚಿಕ್ಕಮಂಗಳೂರು ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಪ್ರತಿನಿಧಿಗಳಿಗೆ ಮತ್ತು ಸ್ವ ಸಹಾಯ ಸಂಘದ ಮಹಿಳೆಯರಿಗೆ ” ನವೀಕರಿಸಬಹುದಾದ ಇಂಧನ ಮತ್ತು ಘನ ತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ನಾಯಕ್ ಎನ್‌‌ರವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಶನ್‌ನ ಟ್ರಸ್ಟಿ ವಿನಾಯಕರವರು ನವೀಕರಿಸಬಹುದಾದ ಘನ ತ್ಯಾಜ್ಯ ಮತ್ತು ಮಳೆ ನೀರು ಕೊಯ್ಲು ವಿಷಯದ ಬಗ್ಗೆ ಮಾಹಿತಿ ನೀಡಿದರು.

ಇನ್ನೋರ್ವ ಸದಸ್ಯೆ ಶ್ರೀಮತಿ ಸೌಮ್ಯರವರು ಇಂಧನ ಮತ್ತು ಸೋಲಾರ್ ಅಳವಡಿಸುವಿಕೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ NRLM ನ ವ್ಯವಸ್ಥಾಪಕ ವಾಣಿಶ್ರೀ, ತಾಲೂಕು ಪಂಚಾಯತ್ NRLM ಸಂಯೋಜಕ ಪ್ರದೀಪ್ ಕಾಮತ್ ಮತ್ತು ಶ್ರೀಮತಿ ದೀಕ್ಷಿತಾ, ಗ್ರಾಮ ಪಂಚಾಯತ್ ಸದಸ್ಯ ಎಲ್ಯಣ್ಣ ಪೂಜಾರಿ, ಅಂಗನವಾಡಿ ಕಾರ್ಯಕರ್ತೆಯರು, ಚಿಗುರು ಸಂಜೀವಿನಿ ಒಕ್ಕೂಟ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಜಯ ಕೆ ಸಭೆಯನ್ನು ಸ್ವಾಗತಿಸಿದರು, ಕೃಷಿ ಸಖಿ ಶ್ರೀಮತಿ ಕೃಪ ಎಸ್‌ ಧನ್ಯವಾದಗೈದರು.

- Advertisement -

Related news

error: Content is protected !!