Wednesday, July 22, 2026
spot_imgspot_img
spot_imgspot_img

ಪಡುಬಿದ್ರೆ: ಬೈಕ್ ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು-ಸವಾರನಿಗೆ ಗಾಯ

- Advertisement -
- Advertisement -

ಪಡುಬಿದ್ರೆ: ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.೧೬ರಂದು ಸಂಜೆ ತೆಂಕ ಎರ್ಮಾಳಿನ ಸತ್ಯಂ ಬಾರ್‌ ಎದುರುಗಡೆ ರಾ.ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ತೆಂಕ ಎರ್ಮಾಳಿನ ಅಣ್ಣಯ್ಯ ಬಂಗೇರ (67) ಎಂದು ಗುರುತಿಸಲಾಗಿದೆ.

ಬಾದಾಮಿ ಮೂಲದ ಹಸನ್ ಎಂಬವರು ಕಾಪುನಿಂದ ಸುರತ್ಕಲ್ ಕಡೆ ಬೈಕಿನಲ್ಲಿ ಹೋಗುತ್ತಿದ್ದಾಗ ರಸ್ತೆ ದಾಟುತ್ತಿದ್ದ ಅಣ್ಣಯ್ಯ ಬಂಗೇರ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಅಣ್ಣಯ್ಯ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರ ಹಸನ್ ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಬಗ್ಗೆ ತಿಳಿದು ಬಂದಿದೆ.

ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!