Tuesday, July 28, 2026
spot_imgspot_img
spot_imgspot_img

ಉಡುಪಿ: ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

- Advertisement -
- Advertisement -

ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿಯಲ್ಲಿ ನಡೆದಿದೆ.

ಮಗುವಿನ ತಾಯಿ, ಮಗುವನ್ನು ಎತ್ತಿಕೊಂಡೇ ಮನೆಯ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಈ ವೇಳೆ ಮಗು ಆಕೆಯ ಕೈಯಿಂದ ಜಾರಿ ಬಾವಿಗೆ ಬಿದ್ದಿದೆ ಎನ್ನಲಾಗಿದೆ. ಕೂಡಲೇ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ಹೊರತೆಗೆದಿದ್ದಾರೆ. ಆದರೆ, ಅಷ್ಟರಾಗಲೇ ಮಗು ಮೃತಪಟ್ಟಿತ್ತು.

ಉಡುಪಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಭರತೇಶ್ ಕಂಕಣವಾಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!