Thursday, July 23, 2026
spot_imgspot_img
spot_imgspot_img

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

- Advertisement -
- Advertisement -

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಹೊರಡಿಸಿದ್ದಾರೆ.

ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18ರಂದು ಉಜಿರೆಯಲ್ಲಿರುವ ಮಹೇಶ್‌ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್‌ ಜಾರಿ ಮಾಡಲು ಮುಂದಾಗಿದ್ದಾರೆ ಆದರೆ ತಿಮರೋಡಿ ಈ ಸಂದರ್ಭ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

- Advertisement -

Related news

error: Content is protected !!