Tuesday, July 21, 2026
spot_imgspot_img
spot_imgspot_img

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲೆಯಲ್ಲಿ ಬಾಲಕರ ಶೌಚಾಲಯ ಶಿಲಾನ್ಯಾಸ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದಲ್ಲಿ ಮಂಗಳೂರು NMPA ಇವರ CSR ಅನುದಾನದಲ್ಲಿ ಹತ್ತು ಲಕ್ಷ ಎಪ್ಪತೈದು ಸಾವಿರ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಾಲಕರ ಶೌಚಾಲಯ ಶಿಲಾನ್ಯಾಸವನ್ನು ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್ ನೆರವೇರಿಸಿದರು.

ಈ ಅನುದಾನ ಒದಗಿಸಿದ ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ರವಿಪ್ರಕಾಶ್, ವಿಟ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕಾರ್ಯದರ್ಶಿ ಶಂಕರನಾರಾಯಣ ಪ್ರಸಾದ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರಾದ ನಿತ್ಯಾನಂದ ನಾಯಕ್ ಮತ್ತು ಸದಾಶಿವ ಬನ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಉಪ ಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ, ಗುತ್ತಿಗೆದಾರ ಶಶಿಕಾಂತ್, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!