- Advertisement -
- Advertisement -
ಉಡುಪಿ, ಡಿ.20: ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ, ಮೋಟಾರು ವಾಹನ ನಿಯಮಾವಳಿಗಳನ್ವಯ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್‌ಗಳಲ್ಲಿ ಕಡ್ಡಾಯವಾಗಿ ಬಾಗಿಲು (ಡೋರ್) ಅಳವಡಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆಾಧಿಕಾರಿ (ಆರ್‌ಟಿಒ) ಸೂಚನೆ ನೀಡಿದ್ದಾರೆ.

ಈ ನಿಯಮವನ್ನು 2026ರ ಜನವರಿ 20ರೊಳಗೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕಿದ್ದು, ನಿಗದಿತ ಅವಧಿಯೊಳಗೆ ಡೋರ್ ಅಳವಡಿಸದೇ ಸಂಚರಿಸುವ ಬಸ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರ್‌ಟಿಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಾ ಬಸ್ ಮಾಲಕರು ನಿಯಮವನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ
- Advertisement -








