Monday, July 20, 2026
spot_imgspot_img
spot_imgspot_img

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ- ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

- Advertisement -
- Advertisement -

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ ಭೀತಿ ಶುರುವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಡಿಸೆಂಬರ್​​ ಸೇರಿದಂತೆ ಜನವರಿಯಿಂದ ಮಾರ್ಚ್​​ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್‌ಗಳನ್ನು ಇರಿಸಿಕೊಳ್ಳುವುದು, ಫ್ಲೂ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್‌ಗೆ ಸೂಚಿಸಲಾಗಿದೆ.

ಇನ್ನು ಸೋಂಕಿತರ ಎಂಜಿಲಿನಿಂದ ಸೋಂಕು ಹರಡುತ್ತದೆ. ಮಕ್ಕಳು, ಹಿರಿಯರು, ಗರ್ಭಿಣಿಯರು, ಔಷಧಿಗಳ ಮೇಲೆ ಅವಲಂಬಿತರಾದವರಿಗೆ ಹೆಚ್ಚಿನ ಅಪಾಯವಿದೆ. ಸೀಸನಲ್ ಫ್ಲೂ ತಗುಲಿದರೆ ಆಸ್ಪತ್ರೆಗೆ ದಾಖಲಾಗುವ ಅಪಾಯವಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈ-ಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣಲಕ್ಷಣಗಳು. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಇರಬಹುದು ಅಥವಾ ಕೆಲವೊಮ್ಮೆ 3 ವಾರಗಳ ಕಾಲ ಇರಬಹುದು.

- Advertisement -

Related news

error: Content is protected !!