Thursday, July 23, 2026
spot_imgspot_img
spot_imgspot_img

ಅಮೆರಿಕದ ಇಂಟರ್‌ನೆಟ್ ಉಪಗ್ರಹವನ್ನ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಭಾರತದ ಬಾಹುಬಲಿ

- Advertisement -
- Advertisement -

ಶ್ರೀಹರಿಕೋಟಾ: ಅಮೆರಿಕದ ಬ್ಲೂಬರ್ಡ್-೬ ಉಪಗ್ರಹವನ್ನು ಭಾರತದ ‘ಬಾಹುಬಲಿ’ ರಾಕೆಟ್ ಮಾರ್ಕ್-3 (LVM3)-M6 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.

ಶ್ರೀಹರಿಕೋಟಾ ಉಡ್ಡಯನ ಕೇಂದ್ರದ ಎರಡನೇ ಲಾಂಚ್ ಪ್ಯಾಡ್‌ನಿಂದ ಬೆಳಗ್ಗೆ 8:54ಕ್ಕೆ ಮಾರ್ಕ್ 3 ರಾಕೆಟ್ 6,500 ಕೆ.ಜಿ ತೂಕದ ಭಾರೀ ಉಪಗ್ರಹವನ್ನು ಹೊತ್ತುಕೊಂಡು ನಭಕ್ಕೆ ಚಿಮ್ಮಿತು. ಸುಮಾರು 15 ನಿಮಿಷಗಳ ಹಾರಾಟದ ನಂತರ ರಾಕೆಟ್‌ನಿಂದ ಬ್ಲೂಬರ್ಡ್ ಬ್ಲಾಕ್-2 ಬೇರ್ಪಟ್ಟು ಸುಮಾರು 520 ಕಿ.ಮೀ. ಎತ್ತರದಲ್ಲಿ ಅದರ ಉದ್ದೇಶಿತ ಕಕ್ಷೆಯನ್ನು ಯಶಸ್ವಿಯಾಗಿ ಸೇರಿದೆ.

ಉಪಗ್ರಹ ಉಡಾವಣೆ ಉಶಸ್ವಿಯಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಇಸ್ರೋವನ್ನು ಅಭಿನಂದಿಸಿದ್ದಾರೆ. LVM3-M6 ಯಶಸ್ವಿಯಾಗಿ ಮತ್ತು ನಿಖರವಾಗಿ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹವನ್ನು ಉದ್ದೇಶಿತ ಕಕ್ಷೆಗೆ ಸೇರಿಸಿದೆ ಎಂದು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ತಿಳಿಸಿದ್ದಾರೆ.

ಭಾರತದ ನೆಲದಿಂದ ಭಾರತದ ರಾಕೆಟ್ ಮೂಲಕ ಉಡಾವಣೆ ಮಾಡಲಾದ ಅತ್ಯಂತ ಭಾರವಾದ ಉಪಗ್ರಹ ಇದಾಗಿದೆ. ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ ಮತ್ತು ಅಮೆರಿಕ ಮೂಲದ AST ಸ್ಪೇಸ್‌ಮೊಬೈಲ್ ಮಧ್ಯೆ ನಡೆದ ವಾಣಿಜ್ಯ ಒಪ್ಪಂದದ ಭಾಗವಾಗಿ ಉಪಗ್ರಹವನ್ನು ಉಡಾವಣೆ ಮಾಡಲಾಗಿತ್ತು.

- Advertisement -

Related news

error: Content is protected !!