Thursday, July 23, 2026
spot_imgspot_img
spot_imgspot_img

ಬೆಳ್ತಂಗಡಿ: ಇನ್ಫಿನಿಟಿ ಫೌಂಡೇಶನ್ ಜಮೀನಿನಲ್ಲಿ ಅನಧಿಕೃತ ಕಟ್ಟಡ ಆರೋಪ-ನಿರ್ಬಂಧ ಟೇಪ್‌ ಅಳವಡಿಸಿ ಕಾಮಗಾರಿ ಸ್ಥಗಿತಗೊಳಿಸಿದ ಅಧಿಕಾರಿಗಳು

- Advertisement -
- Advertisement -

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುವೆಟ್ಟು ಗ್ರಾಮದ ಸರ್ವೇ ನಂಬರ್ 117ರಲ್ಲಿ ಇನ್ಫಿನಿಟಿ ಫೌಂಡೇಶನ್‌ಗೆ ಸೇರಿದ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ.


ಗ್ರಾಮ ಪಂಚಾಯತ್ ಕುವೆಟ್ಟು ನೀಡಿದ ಮಾಧ್ಯಮ ಪ್ರಕಟಣೆಯಂತೆ, ದಿನಾಂಕ 27/12/2025 ರಂದು ಸದರಿ ಜಮೀನಿನಲ್ಲಿ ನಡೆಯುತ್ತಿದ್ದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗ್ರಾಮ ಪಂಚಾಯತ್ ಕುವೆಟ್ಟು ಪಿಡಿಒ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಕಂದಾಯ ಇಲಾಖೆ ಕಂದಾಯ ನಿರೀಕ್ಷಕರು ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಪರಿಶೀಲನೆ ನಡೆಸಿ ಸ್ಥಗಿತಗೊಳಿಸಲಾಗಿದೆ.

ಅನಧಿಕೃತ ಕಟ್ಟಡ ನಿರ್ಮಾಣ ನಡೆದಿದೆ ಎಂಬ ದೂರಿನ ಹಿನ್ನೆಲೆ, ಸ್ಥಳದಲ್ಲಿ ನಿರ್ಬಂಧ ಟೇಪ್‌ ಹಾಗೂ ಬ್ಯಾನರ್‌ಗಳನ್ನು ಅಳವಡಿಸಿ ಮುಂದಿನ ಆದೇಶದವರೆಗೆ ಕಾಮಗಾರಿ ಮುಂದುವರಿಯದಂತೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ನಿಯಮಾನುಸಾರ ಅನುಮತಿಗಳು ಇಲ್ಲದಿರುವುದು ದೃಢಪಟ್ಟಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!