- Advertisement -
- Advertisement -




ಶಿವಮೊಗ್ಗ: ವ್ಯಕ್ತಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಚಾಕು ಇರಿದ ಘಟನೆ ಶಿವಮೊಗ್ಗ ಮಲವಗೊಪ್ಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮಲವಗೊಪ್ಪ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು. ದಾಳಿಯ ರಭಸಕ್ಕೆ ವಿನೋದ್ ಅವರ ಮುಖ, ಕೈ ಹಾಗೂ ಮೈಮೇಲೆ ತೀವ್ರ ಗಾಯಗಳಾಗಿವೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ವಿಕ್ರಂ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
- Advertisement -








