Friday, July 24, 2026
spot_imgspot_img
spot_imgspot_img

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಎಸ್‌ಐಟಿಗೆ ಹೆಚ್ಚುವರಿ ಇಬ್ಬರು ಅಧಿಕಾರಿಗಳ ಸೇರ್ಪಡೆಗೆ ಕೇರಳ ಹೈಕೋರ್ಟ್ ಗ್ರೀನ್ ಸಿಗ್ನಲ್

- Advertisement -
- Advertisement -

ತಿರುವಂತನಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ ಇಬ್ಬರು ಅಧಿಕಾರಿಗಳನ್ನು ಸೇರಿಸಿಕೊಳ್ಳಲು ಕೇರಳ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ.

ತನಿಖಾ ತಂಡಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಶ್ರೇಣಿಯ ಇಬ್ಬರು ಅಧಿಕಾರಿಗಳನ್ನು ಸೇರಿಸಬೇಕೆಂದು ಕೋರಿ ಎಸ್‌ಐಟಿ ಮುಖ್ಯಸ್ಥರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾ.ಜಿಯಾದ್ ರೆಹಮಾನ್ ಎಎ ಮತ್ತು ನ್ಯಾ. ಎಂ.ಬಿ ಸ್ನೇಹಲತಾ ಅವರನ್ನೊಳಗೊಂಡ ರಜಾ ಪೀಠವು ಪುರಸ್ಕರಿದೆ.

ವಿಶೇಷ ತನಿಖಾ ತಂಡದ ಮುಖ್ಯಸ್ಥರು ಎಸ್‌ಐಟಿಗೆ ಇಬ್ಬರು ಅಧಿಕಾರಿಗಳನ್ನು ಸೇರಿಸಿಕೊಳ್ಳಲು ಕೇರಳ ಹೈಕೋರ್ಟ್ ಅನುಮತಿ ಕೋರಿ ವರದಿ ಸಲ್ಲಿಸಿದ್ದರು. ವರದಿಯನ್ನು ಪರಿಗಣಿಸಿದ ನಂತರ, ಇಬ್ಬರ ಅಧಿಕಾರಿಗಳ ಸೇರ್ಪಡೆಗೆ ಅನುಮತಿ ನೀಡಬಹುದು ಎಂದು ಭಾವಿಸುತ್ತೇವೆ ಎಂದು ಪೀಠ ಆದೇಶ ಹೊರಡಿಸಿದೆ.

- Advertisement -

Related news

error: Content is protected !!