Tuesday, September 29, 2026
spot_imgspot_img
spot_imgspot_img

ಕಡಬ: ಬಸ್‌ ತಂಗುದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

- Advertisement -
- Advertisement -

ಕಡಬ: ಬಸ್‌ ತಂಗುದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ನಿವಾಸಿ ದೇವಯ್ಯ (54) ಎಂದು ಗುರುತಿಸಲಾಗಿದೆ.

ಡಿ.29ರಂದು ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿರುವ ಬಸ್ ತಂಗುದಾಣದಲ್ಲಿ ದೇವಯ್ಯ ಅವರು ಮಲಗಿದ್ದ ಸ್ಥಿತಿಯಲ್ಲಿದ್ದಾರೆ ಎಂಬ ಮಾಹಿತಿ ಅವರ ಕುಟುಂಬದವರಿಗೆ ಲಭಿಸಿತ್ತು. ಮಾಹಿತಿ ತಿಳಿದ ತಕ್ಷಣ ಮನೆಯವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ದೇವಯ್ಯ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹವನ್ನು ಗಮನಿಸಿದಾಗ ಬಾಯಿಯಲ್ಲಿ ನೊರೆ ಬರುತ್ತಿದ್ದು, ಇವರು ಜೀವನದಲ್ಲಿ ಜಿಗುಪ್ಪೆಗೊಂಡು ಯಾವುದೋ ವಿಷಕಾರಿ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಸಹಜ ಪ್ರಕರಣ (UDR) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

- Advertisement -

Related news

error: Content is protected !!