Tuesday, July 28, 2026
spot_imgspot_img
spot_imgspot_img

ಉಪ್ಪಿನಂಗಡಿ: ಬ್ಯಾಂಕ್ ಸಿಬ್ಬಂದಿ ನಾಪತ್ತೆ

- Advertisement -
- Advertisement -

ಉಪ್ಪಿನಂಗಡಿ: ಪೆರ್ನೆಯ ಬ್ಯಾಂಕ್ ನಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ(30) ಎಂಬವರು ಡಿ.17 ರಿಂದ ನಾಪತ್ತೆಯಾಗಿದ್ದು, ಅವರ ಸಹೋದರ ದೂರು ನೀಡಿದ್ದಾರೆ.

ಡಿ.17 ರಂದು ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಹೇಳಿ ಹೋದವರು ಬಳಿಕ ಪತ್ತೆಯಾಗಿಲ್ಲ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ಸುಬ್ರಹ್ಮಣ್ಯಂ ವಾಸ್ತವ್ಯವಿದ್ದರು. ವಿಷ್ಣು ಬಳಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾರೆ ಎನ್ನಲಾಗಿದೆ. ಆದರೆ, ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!