Sunday, July 19, 2026
spot_imgspot_img
spot_imgspot_img

ಬೆಳ್ತಂಗಡಿ: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಅ.ಕ್ರ. 68/1989 (ಕಲಂ 341, 323, 326 ಜೊತೆಗೆ 34 ಐಪಿಸಿ) ಹಾಗೂ CC No. 1720/1990, CR No. LPC 04/1992 ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ರವೀಂದ್ರ ಚಾರ್ಮಾಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಪೊಲೀಸರು ಕಾರ್ಕಳ ತಾಲೂಕು ನಲ್ಲೂರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದದ್ದು ಜ.06ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ದೀರ್ಘಕಾಲದಿಂದ ನ್ಯಾಯಾಲಯದ ವಾರಂಟ್ ಬಾಕಿ ಉಳಿದಿದ್ದ ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆಯು ಯಶಸ್ವಿಯಾಗಿದೆ.

- Advertisement -

Related news

error: Content is protected !!