- Advertisement -
- Advertisement -






ಚಿತ್ರದುರ್ಗ: ರಸ್ತೆ ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ಮಂಗಳವಾರ (ಜ.6) ನಡೆದಿದೆ.ಗಿರಿರಾಜ್ (46), ಕಿರಣ್ (25), ಅರುಣ್ (32) ಮತ್ತು ಹನಿಂತ(32) ಮೃತಪಟ್ಟವರು. ಅಪಘಾತದಲ್ಲಿ ಇತರ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಮಿಕರು ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮದಲ್ಲಿ ಅಡಿಕೆ ಲೋಡ್ ಇಳಿಸಿ ವಾಪಸ್ ಬರುತ್ತಿದ್ದಾಗ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -








