Tuesday, July 21, 2026
spot_imgspot_img
spot_imgspot_img

ಶಿವಮೊಗ್ಗ: ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ!

- Advertisement -
- Advertisement -

ಶಿವಮೊಗ್ಗ : ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ವಾಟ್ಸಾಪ್‌ನಲ್ಲಿ ಡೆತ್ ನೋಟ್ ಕಳುಹಿಸಿ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮುಹಮ್ಮದ್ ಝಕ್ರಿಯಾ(55) ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್‌ಸ್ಟೇಬಲ್. ಮುಹಮ್ಮದ್ ಝಕ್ರಿಯಾ ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದವರು ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು.

ಬುಧವಾರ(ಜ.07) ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ನಂತರ ಠಾಣೆಗೆ ವಾಪಸಾಗಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ಪಶ್ಚಿಮ ಸಂಚಾರ ಠಾಣೆಯ ಹಿಂಬದಿ ಸೆಲ್ ಗಳಿರುವ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಡೆತ್ ನೋಟ್ ನಲ್ಲಿ ಠಾಣೆಯ ಸಿಬ್ಬಂದಿಯೊಬ್ಬರು ಕಿರುಕುಳ ನೀಡಿರುವ ಬಗ್ಗೆ ಬರೆದಿದ್ದಾರೆ , ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!