




ಉಡುಪಿ : ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಟಿಪ್ಪರ್ ಗಳ ಆರ್ಭಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ವಾಹನಗಳಿಗೆ 60ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್ ಕಡ್ಡಾಯವಾಗಿ ಅಳವಡಿಸುವ ಕುರಿತು ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ.
ಈ ವಾಹನಗಳು ಅತಿಯಾದ ವೇಗ ಹಾಗೂ ನಿರ್ಲಕ್ಷತನದ ಚಾಲನೆಯಿಂದ ನಿರಂತರ ವಾಗಿ ಅಪಘಾತಗಳು ಸಂಭವಿಸುತ್ತಿದ್ದು, ಆದುದರಿಂದ ಇತ್ತೀಚೆಗೆ ನಡೆದ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಈ ನಿಯಮ ಪಾಲನೆಗಾಗಿ ಎಲ್ಲಾ ಲಾರಿ ಚಾಲಕ ಮಾಲಕರಿಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ವಿಚಾರವಾಗಿ ಚಾಲಕರಿಗೆ ಯಾವುದೇ ಮಾಹಿತಿ ಕೊರತೆಯಾಗದಂತೆ ಜಾಗೃತಿ ಮೂಡಿಸಲು ಮುಂದಿನ ದಿನಗಳಲ್ಲಿ ಕರಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.








