- Advertisement -
- Advertisement -




ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ಖಾದರ್ @ ಶೌಕತ್ (ವಿಟ್ಲ ಕಸಬ ಗ್ರಾಮ, ಬಂಟ್ವಾಳ ತಾಲೂಕು) ಎಂಬಾತನ ವಿರುದ್ಧ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ ಸೇರಿದಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದವು.
ವಿಟ್ಲ ಪೊಲೀಸ್ ಠಾಣಾಧಿಕಾರಿಗಳ ವರದಿಯ ಆಧಾರದಲ್ಲಿ, ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶ ಹೊರಡಿಸಿದ್ದರು.

ಸದರಿ ಆದೇಶದಂತೆ ದಿನಾಂಕ 08-01-2026 ರಂದು ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ.


- Advertisement -








