Friday, October 23, 2026
spot_imgspot_img
spot_imgspot_img

ತುಮಕೂರು: ರಸ್ತೆ ಅಪಘಾತ; ಏಳು ವರ್ಷದ ಬಾಲಕಿ ಸೇರಿ ನಾಲ್ವರು ಸಾವು!

- Advertisement -
- Advertisement -

ತುಮಕೂರು: ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ(ಜ.9) ನಡೆದಿದೆ.

ಕೊಪ್ಪಳ ಜಿಲ್ಲೆಯ ನಿವಾಸಿಗಳಾದ, ಸಾಕ್ಷಿ (7), ಮಾರುತಪ್ಪ(45), ವೆಂಕಟೇಶ(30), ಗವಿಸಿದ್ದಪ್ಪ(28)ಮೃತರೆಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಶ್ರೀನಿವಾಸ್, (32), ಪ್ರವೀಣ್ ಕುಮಾರ್ (28), ರಾಜಪ್ಪ (45), ಹುಲಿಗಪ್ಪ (32), ರಾಕೇಶ್ (24), ತಿರುಪತಿ (33), ಶ್ರೀನಿವಾಸ್, (32) ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿದ್ದ ಚಾಲಕ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!