





ಬೆಳ್ತಂಗಡಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಯು ತಾಂತ್ರಿಕ ಅಡಚಣೆಯಿಂದಾಗಿ ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆ ನಡೆದಿದೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ.
ಲಾರಿಯ ಟಯರ್ ನ ಭಾಗದಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿ, ಲಾರಿಯಲ್ಲಿದ್ದ ಮೆಕ್ಕೆಜೋಳದ ಜೊತೆಗೆ ಲಾರಿಯೂ ಸಂಪೂರ್ಣವಾಗಿ ಸುಟ್ಟು ಹೋಗಿ, ಬೆಂಕಿಯ ತೀವ್ರತೆಯಿಂದ ಘಾಟ್‌ನ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿದ ಕಾರಣ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ. ಘಟನೆಯ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.








