Tuesday, September 8, 2026
spot_imgspot_img
spot_imgspot_img

ನವದೆಹಲಿ: ಯೂಟ್ಯೂಬ್ ವಿಡಿಯೋ ನೋಡಿ ಆಪರೇಷನ್ ಮಾಡಿದ ನಕಲಿ ವೈದ್ಯ…!

- Advertisement -
- Advertisement -

ನವದೆಹಲಿ : ಬಿಹಾರದ ಭಾಗಲ್ಪುರದಲ್ಲಿ ನಕಲಿ ವೈದ್ಯನೋರ್ವ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋ ನೋಡಿಕೊಂಡು ಆಪರೇಷನ್ ಮಾಡಿದ್ದು, ಇದರ ಪರಿಣಾಮ ಆಪರೇಷನ್ ಸಮಯದಲ್ಲಿ ಮಹಿಳೆ ಮೃತಪಟ್ಟಿದ್ದು, ಮಗು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಸ್ವಾತಿ ದೇವಿ ಎಂದು ಗುರುತಿಸಲಾಗಿದೆ. ಅವರ ಅತ್ತೆ-ಮಾವ ಜಾರ್ಖಂಡ್‌ನ ಠಾಕೂರ್ಗಂಟಿ ಮೋಧಿಯಾದಲ್ಲಿ ವಾಸಿಸುತ್ತಿದ್ದು, ಅವರ ಪತಿ ರೋಷನ್ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಗರ್ಭಿಣಿಯಾದ ನಂತರ ಮಹಿಳೆ ರಸಲ್‌ಪುರದಲ್ಲಿರುವ ತನ್ನ ತವರುಮನೆಯಲ್ಲಿದ್ದರು. ಅಲ್ಲಿ ಅವರು ಶ್ರೀಮಠ ಸ್ಥಾನದ ಬಳಿಯ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು.

ಗುರುವಾರ ರಾತ್ರಿ ಸ್ವಾತಿ ದೇವಿಗೆ ಹೆರಿಗೆ ನೋವು ಕಾಣಿಸಿಕೊಡ ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಕೆಯನ್ನ ಪರೀಕ್ಷಿಸಿದ ವೈದ್ಯರು ತಮ್ಮ ಸಹಾಯಕರೊಂದಿಗೆ ಆಪರೇಷನ್ ಮಾಡಲು ಸಜ್ಜಾದರು. ಆ ಮಹಿಳೆಯ ಕುಟುಂಬದ ಒಪ್ಪಿಗೆಯನ್ನು ಪಡೆದ ನಂತರ ವೈದ್ಯರು ಹೆರಿಗೆಯ ಕಾರ್ಯವಿಧಾನವನ್ನು ಅರ್ಥ ಮಾಡಿಕೊಳ್ಳಲು ಯೂಟ್ಯೂಬ್ ವೀಡಿಯೊವನ್ನು ವೀಕ್ಷಿಸಿದ ಬಳಿಕ ಮೊಬೈಲನ್ನು ಆಪರೇಷನ್ ಮಾಡುವ ಜಾಗದಲ್ಲಿಟ್ಟುಕೊಂಡೇ ಅಗತ್ಯ ವೈದ್ಯಕೀಯ ಸಹಾಯವಿಲ್ಲದೆಯೇ ಗರ್ಭಿಣಿಗೆ ಆಪರೇಷನ್ ಮಾಡಿದ್ದಾರೆ.

ಈ ವೇಳೆ ಮಹಿಳೆಗೆ ತೀವ್ರ ರಕ್ತಸ್ರಾವವಾಗಿ ಮಹಿಳೆಯ ಸ್ಥಿತಿ ಗಂಭೀರವಾದಾಗ, ಉತ್ತಮ ಚಿಕಿತ್ಸೆಗಾಗಿ ಭಾಗಲ್ಪುರಕ್ಕೆ ಕರೆದುಕೊಂಡು ಹೋಗಲು ಸಲಹೆ ನೀಡಿದ್ದಾರೆ. ಆ ಕೂಡಲೇ ಆಸ್ಪತ್ರೆ ಮುಚ್ಚಿ ವೈದ್ಯರು ಪರಾರಿಯಾಗಿದ್ದರು. ವೈದ್ಯರು ಸಾಮಾನ್ಯ ಹೆರಿಗೆಯ ಬದಲು ಸಿಸೇರಿಯನ್ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಒತ್ತಾಯಿಸಿರು. ಶಸ್ತ್ರಚಿಕಿತ್ಸೆಯ ನಂತರ ಮಗಳು ಮೃತಪಟ್ಟಳು ಎಂದು ಮೃತಳ ತಾಯಿ ಸುಷ್ಮಾ ತಿಳಿಸಿದ್ದಾರೆ.


ಈ ವಿಷಯ ತಿಳಿಯುತ್ತಿದ್ದಂತೆ ಮಹಿಳೆಯ ಕುಟುಂಬಸ್ಥರು ಹಾಗೂ ಊರಿನವರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆಯ ಶವವನ್ನು ಸ್ವಾಧೀನಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಪೊಲೀಸರು ಅಕ್ರಮ ಆಸ್ಪತ್ರೆಯನ್ನು ಸೀಜ್ ಮಾಡಿದ್ದು, ಮಹಿಳೆಯ ಸಾವು ವರದಿಯಾಗಿದೆ. ತನಿಖೆ ನಂತರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪ-ವಿಭಾಗೀಯ ಆಸ್ಪತ್ರೆಯ ಉಸ್ತುವಾರಿ ಉಪ ಸೂಪರಿಂಟೆಂಡೆಂಟ್ ಡಾ. ಪವನ್ ಕುಮಾರ್ ಗುಪ್ತಾ ಹೇಳಿದ್ದಾರೆ.

- Advertisement -

Related news

error: Content is protected !!