- Advertisement -
- Advertisement -





ಉಳ್ಳಾಲ: ಕಾರಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪಾಡಿ (24) ಎಂದು ಗುರುತಿಸಲಾಗಿದೆ.
ಅಹ್ಮದ್ ಹಾಶೀರ್ ಹಾಗೂ ಮುಹಮ್ಮದ್ ಮಹಾಝ್ ಜ.5 ರಂದು ರಾತ್ರಿ ಮಂಗಳೂರಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ಊರಿಗೆ ಮರಳುತ್ತಿದ್ದರು. ತಲಪಾಡಿ ಕಡೆ ಹೋಗುತ್ತಿದ್ದ ಕಾರಿಗೆ ಬೀರಿ ಬಳಿ ಸ್ಕೂಟರ್ ಡಿಕ್ಕಿ ಆಗಿದೆ. ಈ ವೇಳೆ ರಸ್ತೆ ಗೆ ಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಹೆಚ್ಚುವರಿ ಚಿಕಿತ್ಸೆ ಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








