- Advertisement -
- Advertisement -





ಉಳ್ಳಾಲ: ಸೋಮೇಶ್ವರದ ಪಿಲಾರು ದೇಲಂತಬೆಟ್ಟು ನಿವಾಸಿ ಚಂದ್ರಹಾಸ್ ಶೆಟ್ಟಿ (55) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಯ್ಯಪ್ಪ ಮಾಲಾ ವ್ರತಾಧಾರಿಗಳ ಜೊತೆ ಶನಿವಾರ ಅರ್ಕುಳ ತುಪ್ಪೆಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದ ಅವರು ಕೇರಳದ ಎರಿಮಲೆ ಏರುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿದ್ದಾರೆ.
ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಮೃತ ಚಂದ್ರಹಾಸ್ ಅವರು ಮೂಲತಃ ಬಾಕ್ರಬೈಲ್ ನಿವಾಸಿಯಾಗಿದ್ದು, ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು.
ಕಳೆದ ಹತ್ತು ವರ್ಷದಿಂದ ಪಿಲಾರಿನಲ್ಲಿ ಮನೆ ನಿರ್ಮಿಸಿ ವಾಸವಾಗಿದ್ದರು. ಇತ್ತೀಚೆಗಷ್ಟೆ ತನ್ನ ಪುತ್ರಿಯ ವಿವಾಹವನ್ನು ಅದ್ದೂರಿಯಾಗಿ ನಡೆಸಿದ್ದರು. ಮೃತರು ಪತ್ನಿ, ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ.
- Advertisement -








