ಪ್ರಕರಣ ದಾಖಲಾಗುತ್ತಿದ್ದಂತೆ ಮೊಬೈಲ್ ಫೋನ್ ಸ್ವಿಚ್-ಆಫ್ ಮಾಡಿ ಕಾಂಗ್ರೆಸ್ ನಾಯಕ ಪರಾರಿ…!





ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನಕ್ಕೆ ಆಗ್ರಹ ಜೋರಾಗಿದ್ದು, ಅಮೃತಗೌಡ ನೀಡಿದ ದೂರಿನ ಮೆರೆಗೆ ಎಫ್ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿ ರಾಜೀವ್ ಗೌಡ ಎಸ್ಕೇಪ್ ಆಗಿದ್ದಾರೆ ಎನ್ನಲಾಗುತ್ತಿದೆ.
ಫೋನ್ ಸ್ವಿಚ್ ಆಫ್, ಕೈ ನಾಯಕ ಪರಾರಿ
ಪೌರಾಯುಕ್ತೆ ಅಮೃತ ಗೌಡ ಹಾಗೂ ಶಿಡ್ಲಘಟ್ಟ ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ ದೂರಿನ ಮೇರೆಗೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಎರಡು ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎನ್ನಲಾಗ್ತಿದೆ.
ಶಿಡ್ಲಘಟ್ಟ ಪೌರಾಯುಕ್ತೆ ಶ್ರೀಮತಿ ಅಮೃತ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಬ್ಯಾನರ್ ವಿಚಾರವಾಗಿ ಪೌರಾಯುಕ್ತೆ ವಿರುದ್ಧ ಕೀಳುಮಟ್ಟದ ಶಬ್ದಗಳಿಂದ ನಿಂದಿಸಿದ ಕೈ ಮುಖಂಡ ರಾಜೀವ್ ಗೌಡ ಬಂಧನಕ್ಕೆ ಸ್ವತಃ ಕಾಂಗ್ರೆಸ್ ಕಾರ್ಯಕರ್ತರೇ ಪಟ್ಟು ಹಿಡಿದಿದ್ದಾರೆ.








