- Advertisement -
- Advertisement -





ಉಡುಪಿ: ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೆಮ್ಮಣ್ಣು ನಿವಾಸಿ, ವಸೀಂ ಅಕ್ರಮ್ ಮತ್ತು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದ್ದು, ಆರೋಪಿಗಳ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಬಿ ಎನ್ ಎಸ್ ಮತ್ತು ಕಲಂ ಪ್ರಾಣಿ ಹಿಂಸಾ ಪ್ರತಿಬಂದಕ ಕಾಯ್ದೆ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳನ್ನು ಮಂಗಳೂರು ತಾಲೂಕು ಮೂಡುತೆರಾರ್ ಗ್ರಾಮದ ಗಂಜಿಮಠ ಬಸ್ಸು ನಿಲ್ದಾಣದ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
- Advertisement -








