Sunday, July 19, 2026
spot_imgspot_img
spot_imgspot_img

ಬೀದರ್ : ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ನಿಧನ…!

- Advertisement -
- Advertisement -

ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಅವರು ವಯೋಸಹಜ ಕಾಯಿಲೆಯಿಂದ ಬಳಲಿ ತಮ್ಮ 102 ನೇ ವಯಸ್ಸಿನಲ್ಲಿ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ 15 ದಿನಗಳಿಂದ ಬೀದರ್‌ನ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಭಾನುವಾರ (ಜ.11) ಉಸಿರಾಟದ ಸಮಸ್ಯೆ ಮತ್ತು ಬಿಪಿಯಲ್ಲಿ ವ್ಯತ್ಯಾಸವಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಈಶ್ವರ್ ಖಂಡ್ರೆ ಮಾತನಾಡಿ, ಮನೆಯಲ್ಲೇ ಕೊನೆಯುಸಿರೆಳೆಯಬೇಕು ಎಂಬುದು ನಮ್ಮ ತಂದೆಯವರ ಕೊನೆಯಾಸೆಯಾಗಿತ್ತು, ಹೀಗಾಗಿ ಮನೆಗೆ ಶಿಫ್ಟ್ ಮಾಡಿರುವುದಾಗಿ ತಿಳಿಸಿದ್ದರು.

ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೊರ್ಟಾ(ಬಿ) ಗ್ರಾಮದಲ್ಲಿ 1923ರ ಜನವರಿ 8ರಂದು ತಂದೆ ಶಿವಲಿಂಗಪ್ಪ, ತಾಯಿ ಪಾರ್ವತಿ ಬಾಯಿ ಅವರ ಮಗನಾಗಿ ಜನಿಸಿದರು. ಭೀಮಣ್ಣ ಖಂಡ್ರೆ ಅವರು ಲಕ್ಷ್ಮಿಬಾಯಿ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಮೂವರು ಪುತ್ರರು, ಐವರು ಪುತ್ರಿಯರಿದ್ದಾರೆ.

1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರಕ್ಕೆ ದುಮುಕಿದ ಭೀಮಣ್ಣ ಖಂಡ್ರೆ ಅವರು 1962, 1967, 1978 ಮತ್ತು 1983ರಲ್ಲಿ ನಾಲ್ಕು ಬಾರಿ ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1980ರಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾಗಿ, 1988ರಲ್ಲಿ ಬೀದರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು. 1992ರಲ್ಲಿ ಮೊಯ್ಲಿ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಸಾರಿಗೆ ಸಚಿವರಾಗಿ, 1994 ಹಾಗೂ 2000ರಲ್ಲಿ ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 1999ರಲ್ಲಿ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. ಬಳಿಕ 2005ರಲ್ಲಿ ಮರು ಆಯ್ಕೆಯಾಗಿ 2011ರವರೆಗೆ 12 ವರ್ಷ ಕಾಲ ಸುದೀರ್ಘವಾಗಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಲೋಕನಾಯಕ ಎಂದು ಖ್ಯಾತಿ ಪಡೆದಿರುವ ಇವರು ಸಹಕಾರ, ಶಿಕ್ಷಣ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ.

- Advertisement -

Related news

error: Content is protected !!