Tuesday, July 28, 2026
spot_imgspot_img
spot_imgspot_img

ಮಂಗಳೂರು: ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತು ಮಾರಾಟ; ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ಮಂಗಳೂರು ಪೂರ್ವ ಠಾಣಾಧಿಕಾರಿಯವರಿಗೆ ದೊರೆತ ಖಚಿತ ಮಾಹಿತಿಯಂತೆ ದಿ.17-01-2026 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಹಿಂದೆ ಇರುವ ಖಾಲಿ ಜಾಗದಲ್ಲಿ ಕೇರಳದ ಎರ್ನಾಕುಲಂನ ಚುನಯಮಕ್ಕಿಲ್ ನ ನಿವಾಸಿ ಜೂಡ್ ಮಾಥ್ಯೂ(20) ಎಂಬವನು ಬೈಕ್ ನಲ್ಲಿ ನಿಷೇಧಿತ ಎಂ.ಡಿ.ಎಂ.ಎ ಎಂಬ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆಂದು ಖಚಿತ ಮಾಹಿತಿ ಬಂದ ಮೇರೆಗೆ ಸಿಬ್ಬಂದಿಗಳ ಜೊತೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು 5.20 ಗ್ರಾಂ ತೂಕದ ಎಂ.ಡಿ.ಎಂ.ಎ ಮಾದಕ ವಸ್ತು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಎನ್.ಎಸ್ ಬೈಕ್ ಸಮೇತ ಒಟ್ಟು ರೂ 70,000/- ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಪೋಲಿಸರು ಯಶಸ್ವಿಯಾಗಿರುತ್ತಾರೆ.

- Advertisement -

Related news

error: Content is protected !!