Tuesday, July 21, 2026
spot_imgspot_img
spot_imgspot_img

ಪೋಕ್ಸೋ ಪ್ರಕರಣದ ಆರೋಪಿಗೆ 5 ವರ್ಷ ಸಾಧಾರಣ ಶಿಕ್ಷೆ

- Advertisement -
- Advertisement -

ಪುತ್ತೂರು/ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಮಂಗಳೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಿಟ್ಟಿಂಗ್ ಪುತ್ತೂರು) ಶಿಕ್ಷೆ ವಿಧಿಸಿದೆ.ಬೆಳ್ಳಾರೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 42/2020 (ಐಪಿಸಿ ಕಲಂ 354, 506 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 10) ಅಡಿ ದಾಖಲಾದ ಪ್ರಕರಣದಲ್ಲಿ ಆರೋಪಿ ಸೆಲ್ವಕುಮಾರ್ ವಿರುದ್ಧ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿಗೆ 5 ವರ್ಷಗಳ ಸಾಧಾರಣ ಶಿಕ್ಷೆ ಹಾಗೂ ₹20,000 ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡವನ್ನು ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಈ ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿಯಾಗಿದ್ದ ಅಂಜನೇಯ ರೆಡ್ಡಿ ಅವರು ಅಂತಿಮ ವರದಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

- Advertisement -

Related news

error: Content is protected !!