- Advertisement -
- Advertisement -



ದಿನಾಂಕ 21-01-2026ರಂದು ಗುರುವಾರ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.)ದ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಪದಾಧಿಕಾರಿಗಳ ಸಭೆ ಜರಗಿತು. ಸಭೆಯಲ್ಲಿ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿರುವುದರ ಬಗ್ಗೆ ಸ್ಪಷ್ಟಿಕರಣ ನೀಡಲಾಯಿತು.
ಸಭೆಯಲ್ಲಿ ಒಕ್ಕೂಟದ ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಶ್ರೀ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ, ಯುವ ವಿಭಾಗದ ಕಾರ್ಯಧ್ಯಕ್ಷರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕರಾದ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ ಇವರುಗಳು ಉಪಸ್ಥಿತರಿದ್ದರು.
- Advertisement -








