Tuesday, July 21, 2026
spot_imgspot_img
spot_imgspot_img

ಕುಂದಾಪುರ: ಖಾಸಗಿ ಬಸ್‌- ಬೈಕ್ ಢಿಕ್ಕಿ; ಸವಾರ ಮೃತ್ಯು…!

- Advertisement -
- Advertisement -

ಕುಂದಾಪುರ: ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶನಿವಾರ(ಜ.24) ನಡೆದಿದೆ.

ಸೌಕೂರು ನಿವಾಸಿ ವಿಜಯ್ (36) ಮೃತ ಯುವಕ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ಇವರು, ಶನಿವಾರ ಬೆಳಿಗ್ಗೆ ಆಹಾರ ವಸ್ತುಗಳನ್ನು ಖರೀದಿಸಿ ಬೈಕ್ ನಲ್ಲಿ ತಲ್ಲೂರು ಮೂಲಕ ಸೌಕೂರು ಕಡೆಗೆ ಮರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.


ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್‌ವೊಂದನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಎದುರಿನಿಂದ ಬಂದ ಇನ್ನೊಂದು ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ವಿಜಯ್‌ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!