- Advertisement -
- Advertisement -



ಹೊಸದಿಲ್ಲಿ: ನಾಳೆ ದಿಲ್ಲಿಯಲ್ಲಿ ನಡೆಯಲಿರುವ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲು ಯೂರೋಪ್ ಮಂಡಳಿಯ ಆ್ಯಂಟೊನಿಯೊ ಕೋಸ್ಟಾ ಹಾಗೂ ಯೂರೋಪ್ ಆಯೋಗದ ಅಧ್ಯಕ್ಷೆ ಉರ್ಸುಲ್ಲಾ ವಾನ್ ಡೆರ್ ಲೆಯೆನ್ ಇಂದು ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಜಿತಿನ್ ಪ್ರಸಾದ್ ಸ್ವಾಗತಿಸಿದರು ಎಂದು ವರದಿ ಮೂಲಕ ತಿಳಿದು ಬಂದಿದೆ
ನಂತರ ಅವರು ಜನವರಿ 27ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಆಯೋಜಿಸಲಾದ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಡೊನಾಲ್ಡ್ ಟ್ರಂಪ್ ಸರ್ಕಾರದ ಆರ್ಥಿಕ ಮತ್ತು ಭದ್ರತಾ ನೀತಿಗಳಿಂದ ಹೆಚ್ಚುತ್ತಿರುವ ಜಾಗತಿಕ ಕಳವಳಗಳ ಕುರಿತು ಚರ್ಚೆ ನಡೆಸಲಿದ್ದಾರೆ ಮೂಲಗಳಿಂದ ತಿಳಿದು ಬಂದಿದೆ
- Advertisement -








