Tuesday, August 4, 2026
spot_imgspot_img
spot_imgspot_img

ವಿಟ್ಲದಲ್ಲಿ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸ್ ದಾಳಿ – ನಾಲ್ವರ ಬಂಧನ

- Advertisement -
- Advertisement -

ವಿಟ್ಲದಲ್ಲಿ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸ್ ದಾಳಿ – ನಾಲ್ವರ ಬಂಧನವಿಟ್ಲ: ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಅವರ ನೇತೃತ್ವದಲ್ಲಿ 25 ಜನವರಿ 2026ರಂದು ಮಧ್ಯಾಹ್ನ ಕೋಳಿ ಅಂಕ ಜೂಜಾಟದ ಮೇಲೆ ಯಶಸ್ವಿ ದಾಳಿ ನಡೆಸಲಾಗಿದೆ.ಮಧ್ಯಾಹ್ನ ಸುಮಾರು 1:20ಕ್ಕೆ ವಿಟ್ಲಮುಡ್ನೂರು ಗ್ರಾಮದ ಎಲ್ಯಣ್ಣ ಪೂಜಾರಿಯವರ ತೋಟದ ಬಳಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಯಿತು.

ತಕ್ಷಣ ಸಿಬ್ಬಂದಿ ಹಾಗೂ ಪಂಚರೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಸುಮಾರು 2 ಗಂಟೆ ವೇಳೆಗೆ ದಾಳಿ ನಡೆಸಿದರು. ಈ ವೇಳೆ ಪೊಲೀಸರು ಬರುತ್ತಿದ್ದುದನ್ನು ಕಂಡು ಕೆಲವರು ಪರಾರಿಯಾಗಿದ್ದು, ಮಹೇಶ್, ಬಾಬು, ಆನಂದ ಮತ್ತು ಅಣ್ಣು ಎಂಬ ನಾಲ್ವರನ್ನು ಸ್ಥಳದಲ್ಲೇ ಬಂಧಿಸಲಾಯಿತು.ಸ್ಥಳದಿಂದ ರೂ. 4,390 ನಗದು ಹಣ, 8 ಹುಂಜಗಳು (ಅಂದಾಜು ಮೌಲ್ಯ ರೂ. 4,550) ಹಾಗೂ 10 ಕೋಳಿ ಬಾಳುಗಳು (ಅಂದಾಜು ಮೌಲ್ಯ ರೂ. 500)ಗಳನ್ನು ಪಂಚರ ಸಮಕ್ಷಮ ಮಹಜರ್ ಮೂಲಕ ವಶಪಡಿಸಿಕೊಳ್ಳಲಾಗಿದೆ.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 15/2026 ಅಡಿ ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 87, 93 ಹಾಗೂ ಪ್ರಾಣಿಗಳ ಮೇಲೆ ಕ್ರೂರತೆ ತಡೆ ಕಾಯ್ದೆ ಸೆಕ್ಷನ್ 3 ಮತ್ತು 11ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!