Thursday, July 23, 2026
spot_imgspot_img
spot_imgspot_img

ಉಡುಪಿ: ಕಲ್ಸಂಕ ಜಂಕ್ಷನ್ ಬಳಿ ಸ್ಕೂಟ‌ರ್ ಅಪಘಾತ-ಸವಾರ ಸ್ಥಳದಲ್ಲಿಯೇ ಮೃತ್ಯು

- Advertisement -
- Advertisement -

ಉಡುಪಿ: ಕಂಟೈನರ್‌ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಮಣಿಪಾಲದ ಅವಿನಾಶ್ (19) ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನ‌ರ್ ಲಾರಿಯು ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬಿದ್ದಿದ್ದು, ಈ ವೇಳೆ ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ.

ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!