- Advertisement -
- Advertisement -



ಶಿವಮೊಗ್ಗ: ಹೊಸನಗರ ತಾಲೂಕಿನ ಸೂಡುರು ಬಳಿ ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್ ಬಸ್ ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ವೇಳೆ ಬಸ್ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ.
ಬಸ್‌ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದ್ದು, ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
- Advertisement -








