


ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನೆರಾ ಫೋಟೋಗ್ರಾಫರ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬಂಟ್ವಾಳ ವಲಯ ಇದರ ರಜತ ಸಂಭ್ರಮದ ಸಮಾರೋಪ ಮತ್ತು 2025-27 ನೇ ಸಾಲಿನ ಪದಪ್ರದಾನ ಸಮಾರಂಭ ಬಿ ಸಿ ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಮಂಗಳೂರು ಅಭಿಮತ ಟಿ ವಿ ಪಾಲುದಾರರಾದ ಡಾ ಮಮತಾ ಪಿ ಶೆಟ್ಟಿ ಉದ್ಘಾಟಿಸಿದರು.




SKPA ದ ಕ ಮತ್ತು ಉಡ ಉಡುಪಿ ಜಿಲಾಧ್ಯಕ್ಷ ನವೀನ್ ರೈ ಪಂಜಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಕುಮಾರ್ ವೈ, ಬಂಟ್ವಾಳ ಜೆಸಿಐ ಅಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ, SKPA ಸಂಚಾಲಕ ಗೋಪಾಲ್ ಸುಳ್ಯ, ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್ ಬಂಟ್ವಾಳ, ಕಾರ್ಯದರ್ಶಿ ಅಜಯ್ ಮಂಗಳೂರು, ಕ್ರೀಡಾ ಕಾರ್ಯದರ್ಶಿ ಹರೀಶ್ ಕುಂದರ್ ಮತ್ತು ಮಂಗಳೂರು SKPA ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ರಾವ್ ಇವರು ಭಾಗವಹಿಸಿದ್ದರು.
ಬಂಟ್ವಾಳ ವಲಯದ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್, ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ, ಕೋಶಾಧಿಕಾರಿ ವರುಣ್ ಕಲ್ಲಡ್ಕ, ನೂತನ ಅಧ್ಯಕ್ಷ ರಾಜೇಂದ್ರ ಕೆ, ಕೋಶಾಧಿಕಾರಿ ಕೃಷ್ಣರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆನಂದ್ ಎನ್ ಸ್ವಾಗತಿಸಿದರು, ನೂತನ ಕಾರ್ಯದರ್ಶಿ ರವಿ ಕಲ್ಪನೆ ವಂದಿಸಿದರು. ಹೆಚ್ ಕೆ ನಯನಾಡು ನಿರೂಪಿಸಿದರು. ದಯಾನಂದ ಸಹಕರಿಸಿದರು.








