Wednesday, July 22, 2026
spot_imgspot_img
spot_imgspot_img

ಬೆಂಗಳೂರು: ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ತಂಬಾಕು ಜಾಹೀರಾತುಗಳ ಪೋಸ್ಟರ್ ತೆರವು

- Advertisement -
- Advertisement -

ಬೆಂಗಳೂರು: ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಹಾಕಿದ್ದ ಗುಟ್ಕಾ ಜಾಹೀರಾತುಗಳ ಪೋಸ್ಟರನ್ನುಕನ್ನಡ ಸಂಘಟನೆಗಳ ಕಾರ್ಯಕರ್ತರು ಕಿತ್ತೆಸೆಯುತ್ತಿದ್ದಾರೆ. ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ತಂಬಾಕು ಜಾಹಿರಾತುಗಳನ್ನ ಕನ್ನಡಿಗರು ಕಿತ್ತೆಸೆಯುತ್ತಿದ್ದಾರೆ.

ಮೆಜೆಸ್ಟಿಕ್, ಕೆಆರ್ ಪುರಂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹಿರಾತುಗಳನ್ನ ಹರಿದು ಹಾಕಿದ್ದಾರೆ. ವಿಮಲ್, ಆರ್‌ಎಂಡಿ ಸೇರಿ ತಂಬಾಕು ಉತ್ಪನ್ನಗಳ ಜಾಹಿರಾತು ಪೋಸ್ಟರ್‌ಗಳನ್ನ ಸಾರಿಗೆ ಬಸ್‌ಗಳ ಮೇಲೆ ಅಂಟಿಸಿರೋದನ್ನ ಕನ್ನಡ ಸಂಘಟನೆಗಳು ಕೂಡ ವಿರೋಧಿಸಿ ಪೋಸ್ಟರ್ ತೆರವು ಮಾಡುತ್ತಿದ್ದಾರೆ.

ರೂಪೇಶ್ ರಾಜಣ್ಣ ನೇತೃತ್ವದ ಯುವ ಕರ್ನಾಟಕ ತಂಡದ ಕಾರ್ಯಕರ್ತರು ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ಪೋಸ್ಟರ್, ಸ್ಟಿಕ್ಕರ್‌ಗಳನ್ನ ತೆರವು ಮಾಡಿದರು. ಈ ವೇಳೆ ಸಾರ್ವಜನಿಕರು ಕೂಡ ಕನ್ನಡ ಪರ ಹೋರಾಟಗಾರರಿಗೆ ಬೆಂಬಲಿಸಿದರು. ಕೂಡಲೇ ಎಲ್ಲಾ ಬಸ್‌ಗಳ ಮೇಲೆ ಅಂಟಿಸಿರೋ ಪೋಸ್ಟರ್‌ಗಳನ್ನ ತೆರವು ಮಾಡಬೇಕು. ಇಲ್ಲದಿದ್ದರೆ ಕಂಡ ಕಂಡಲ್ಲಿ ಬಸ್‌ಗಳನ್ನ ನಿಲ್ಲಿಸಿ ಜಾಹಿರಾತುಗಳಿಗೆ ಮಸಿ ಬಳಿಯುತ್ತೇವೆ ಅಂತ ಎಚ್ಚರಿಕೆ ನೀಡಿದರು ಎಂದು ವರದಿ ಮೂಲಕ ತಿಳಿದು ಬಂದಿದೆ.

ಒಂದು ವರ್ಷಕ್ಕೆ ಬಿಎಂಟಿಸಿ ಬಸ್‌ಗಳಿಗೆ ಅಳವಡಿಸಿರುವ ಜಾಹಿರಾತುಗಳಿಂದಲೇ 60 ಕೋಟಿ ಆದಾಯವು ನಿಗಮಕ್ಕೆ ಬರುತ್ತದೆ. ಕೇಂದ್ರ ಸರ್ಕಾರವೇ ತಂಬಾಕು ನಿಷೇಧ ಮಾಡಲಿ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

- Advertisement -

Related news

error: Content is protected !!