Saturday, September 5, 2026
spot_imgspot_img
spot_imgspot_img

ಮಡಿಕೇರಿ: ಯುವತಿಯರ ಜೊತೆ ರಾಸಲೀಲೆ ವಿಡಿಯೋ ವೈರಲ್:…!

- Advertisement -
- Advertisement -

ಆರೋಪಿ ಮೊಹಮ್ಮದ್ ಸವದ್‌ ಬಂಧನ

ಮಡಿಕೇರಿ: ಯುವಕನೊಬ್ಬ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಡಿಕೇರಿಯ ಈ ಯುವಕನನ್ನ ಬಂಧಿಸಲಾಗಿದೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆ ಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದ, ಆರೋಪಿಯು ಹಲವು ಯುವತಿರೊಂದಿಗೆ ಇದ್ದ ಖಾಸಗಿ ವಿಡಿಯೋಗಳನ್ನ ಮೊಬೈಲ್ ನಲ್ಲಿ ಚಿತ್ರಿಕರಿಸಿದ್ದ ಎನ್ನಲಾಗಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಸವದ್ ಸ್ನೇಹಿತರೆ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವು ಯುವಕರ ಮೇಲೆ ಹಲ್ಲೆ ನಡೆದಿರುವ ವಿಡಿಯೋ ಕೂಡಾ ಸಾಮಾಜಿಕಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಹಲ್ಲೆ ಸವದ್ ಕಡೆಯವರಿಂದ ನಡೆದಿರಬಹುದು ಎಂದು ಅನುಮಾನ ವ್ಯಕ್ತವಾಗಿದ್ದರು ಕೂಡಾ ಹಲ್ಲೆಗೆ ಒಳಗಾದ ಯುವಕರು ಯಾವುದೇ ದೂರನ್ನು ದಾಖಲಿಸಿಲ್ಲ. ಸದ್ಯ ಕೊಡಗು ಜಿಲ್ಲೆಯಾದ್ಯಂತ ಈ ವಿಡಿಯೋ ಬಾರಿ ಚರ್ಚೆಗೆ ಕಾರಣವಾಗಿದೆ.

- Advertisement -

Related news

error: Content is protected !!